ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ರೋಚಕ ತಿರುವು ಪಡೆದುಕೊಂಡಿದ್ದು, ಕೊನೆ ಕ್ಷಣದಲ್ಲಿ ಜೆಡಿಎಸ್ ಮೈತ್ರಿ ವಿಚಾರ ಮುರಿದುಬಿದ್ದಿದೆ. ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿಯಲು ನಿರ್ಧರಿಸಿದೆ.
ಆರಂಭದಲ್ಲಿ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಲಾಗಿತ್ತು. ಆನಂತರದಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ಎರಡನ್ನೂ ಬಿಟ್ಟು ಪಕ್ಷೇತರರ ಬೆಂಬಲ ಪಡೆಯುವ ತಂತ್ರ ಹೆಣೆದಿದೆ. ಈ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದೆ.
ರಾಜ್ಯದ ಉಪಚುನಾವಣೆ ಸೇರಿ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಬಗ್ಗೆ ಇಂದು ಚರ್ಚೆ
ಮೇಯರ್ ಸ್ಥಾನಕ್ಕೆ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದರೆ, ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಿದ್ದಾರೆ.