alex Certify ಮೊಬೈಲ್ ಗೇಮ್ ಆಡಬೇಡ ಎಂದಿದ್ದಕ್ಕೆ ಯುವಕ ನೇಣಿಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ಗೇಮ್ ಆಡಬೇಡ ಎಂದಿದ್ದಕ್ಕೆ ಯುವಕ ನೇಣಿಗೆ ಶರಣು

ಸದಾಕಾಲ ಮೊಬೈಲ್ ಗೇಮ್ ನಲ್ಲಿ ಮುಳುಗಿರುತ್ತಿದ್ದ ಯುವಕನೊಬ್ಬನಿಗೆ ಆತನ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಆಗಸಗಿಯ 18ವರ್ಷದ ರಾಜು ಸಿದ್ದಪ್ಪ ಅಜಾನಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದು, ಈತ ಸದಾಕಾಲ ಮೊಬೈಲ್ ಗೇಮ್ ನಲ್ಲಿಯೇ ಮಗ್ನನಾಗಿರುತ್ತಿದ್ದ ಎಂದು ಹೇಳಲಾಗಿದೆ.

ಹೀಗಾಗಿ ಆತನ ತಂದೆ-ತಾಯಿ ಬುದ್ಧಿವಾದ ಹೇಳಿದ್ದು ಇಷ್ಟಕ್ಕೇ ಮನನೊಂದ ಆತ ಭಾನುವಾರ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಕಾಕತಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...