ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿದೆ. ಹೀಗಾಗಿ ದ್ವಿತೀಯ ಪಿಯುಸಿಯ ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಂಡಂತಾಗಿದೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದ್ದು, ಆದರೆ ಕೆಲವು ಉಪನ್ಯಾಸಕರು ಗೈರು ಹಾಜರಾಗಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಹತ್ವದ ಸಂದೇಶ ರವಾನಿಸಿದ್ದಾರೆ.
ದ್ವಿತೀಯ ಪಿಯು ಇಂಗ್ಲಿಷ್ ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕ್ಕೆ ಹಾಜರಾಗದಿದ್ದರೆ ಅಂತಹ ಉಪನ್ಯಾಸಕರ ಒಂದು ವರ್ಷದ ವಾರ್ಷಿಕ ವೇತನ, ಬಡ್ತಿಯನ್ನು ಕಡಿತಗೊಳಿಸಲಾಗುವುದು. ಅಲ್ಲದೆ ಜೂನ್ ತಿಂಗಳ ವೇತನವನ್ನು ತಡೆಹಿಡಿಯಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.