ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಮಾತಿನ ಸಮರ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಮುದಿ ಎತ್ತು ಎಂದು ಲೇವಡಿ ಮಾಡಿದ್ದ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಯಡಿಯೂರಪ್ಪ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡರು ಎಳಸು ಎತ್ತುಗಳೇ ಎಂದು ಪ್ರಶ್ನಿಸಿದ್ದಾರೆ.
ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮುದಿ ಎತ್ತು ಟಿ.ಬಿ.ಜಯಚಂದ್ರ ಅವರನ್ನು ಸೋಲಿಸಿ ಪಕ್ಕಕ್ಕೆ ಸರಿಸಬೇಕು ಎಂದು ಬಿಜೆಪಿ ಮುಖಂಡ ಬಿ.ಜೆ.ಪುಟ್ಟಸ್ವಾಮಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಜಯಚಂದ್ರ ಅವರನ್ನು ಮುದಿ ಎತ್ತು ಎನ್ನುವುದಾದರೆ ಯಡಿಯೂರಪ್ಪ, ಪ್ರಧಾನಿ ಮೋದಿ ಹಾಗೂ ದೇವೇಗೌಡರನ್ನು ಏನೆಂದು ಕರೆಯಬೇಕು? ಅವರೆಲ್ಲಾ ಎಳಸು ಎತ್ತುಗಳಾ ಎಂದು ಪ್ರಶ್ನಿಸಿದ್ದಾರೆ.
ಶಿರಾದಲ್ಲಿ ಕಾಂಗ್ರೆಸ್ ಜಯಗಳಿಸುವುದು ನಿಶ್ಚಿತ. ಅಲ್ಲಿ ಬಿಜೆಪಿ ಅಲೆಯಿಲ್ಲ. ಬಿಜೆಪಿ ನಾಯಕರು ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.