ರಾಯಚೂರು: ಸರ್ಕಾರಿ ಶಾಲೆಯಲ್ಲಿ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ರಾಯಚೂರಿನ ಮಸ್ಕಿಯಲ್ಲಿ ನಡೆದಿದೆ.
ಬಂಧಿತ ಆರೋಪಿ ಸೊಗರೆಡ್ಡಿ ಎಂದು ಗುರುತಿಸಲಾಗಿದ್ದು, ಸಿರವಾರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸೊಗರೆಡ್ಡಿ ಬೆಳಗಾವಿ ಮೂಲದ ಹಿರಿಯ ಪೊಲೀಸ್ ಅಧಿಕಾರಿಯ ಸಂಬಂಧಿ ಎಂದು ತಿಳಿದು ಬಂದಿದೆ.
ಸಾಹುಕಾರ್ ಸಿಡಿ ಪ್ರಕರಣ: ಶಿಕ್ಷಕಿ, 4 ಟಿವಿ ವರದಿಗಾರರ ವಶಕ್ಕೆ ಪಡೆದು ವಿಚಾರಣೆ
ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸೊಗರೆಡ್ಡಿ ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಲ್ಲದೇ ಈ ಕುರಿತು ವಿಡಿಯೋ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಈ ವಿಡಿಯೋ ಕೂಡ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಂತ್ರಸ್ತ ಯುವಕನ ತಂದೆ ಸಿರವಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.