alex Certify ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಂತಹ ಅಮಾನವೀಯ ಘಟನೆ ಸಹಿಸಲಾಗದು ಎಂದು ಕಿಡಿಕಾರಿದ್ದಾರೆ.

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತೊಮ್ಮೆ ಏರಿಕೆಯಾಗಲಿದೆ ಗೃಹೋಪಯೋಗಿ ವಸ್ತುಗಳ ಬೆಲೆ

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,ಇದೊಂದು ಹೇಯ ಕೃತ್ಯ. ಇಂತಹ ದುಷ್ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರಿಗೂ ಈ ನಿಟ್ಟಿನಲ್ಲಿ ಸೂಚಿಸಲಾಗಿದೆ ಎಂದು ಹೇಳಿದರು.

ಲಾಕಪ್‌ನಲ್ಲೇ ಹುಟ್ಟುಹಬ್ಬಆಚರಿಸಿಕೊಂಡ ಸುಶೀಲ್‌ ಕುಮಾರ್

ಬೆಂಗಳೂರಿನಲ್ಲಿ ವಾಸವಾಗಿದ್ದ ಬಾಂಗ್ಲಾ ಮೂಲದ ಯುವತಿಯ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಕೃತ್ಯದ ದೃಶ್ಯವನ್ನು ಸೆರೆಹಿಡಿದು ಬಳಿಕ ವೈರಲ್ ಮಾಡಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಸ್ಥಳ ಮಹಜರಿಗೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...