alex Certify ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವರಿಗೆ ಸಧ್ಯಕ್ಕಿಲ್ಲ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವರಿಗೆ ಸಧ್ಯಕ್ಕಿಲ್ಲ ರಿಲೀಫ್

ಧಾರವಾಡ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿಂದ ಬಂಧಿಸಲ್ಪಟ್ಟಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಹಾಜರುಪಡಿಸಲಾಯಿತು. ಈ ವೇಳೆ ಸಿಬಿಐ ಇನ್ನಷ್ಟು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಕೋರಿದೆ.

ಈ ವೇಳೆ ನ್ಯಾಯಾಲಯ ವಿನಯ್ ಕುಲಕರ್ಣಿ ಯವರನ್ನು ಡಿಸೆಂಬರ್ 7ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...