ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ರವಾನಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳಿಗೆ ಪ್ರಮುಖ ಕಾರಣರಾಗಿರುವ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಸಚಿವರ ರಾಜೀನಾಮೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾಗಲೆಂದು ಸಚಿವರ ರಾಜೀನಾಮೆ ಪಡೆದಿರುವುದು ಸಂತಸವಾಗಿದೆ. ಸಿಎಂ ಯಡಿಯೂರಪ್ಪನವರಿಗೆ ಈ ನಿಟ್ಟಿನಲ್ಲಿ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.
ಪ್ರಕರಣದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿ, ಸಂತ್ರಸ್ತ ಯುವತಿಗೂ ನ್ಯಾಯ ಸಿಗುವಂತಾಗಲಿ ಎಂಬುದು ನನ್ನ ಆಗ್ರಹ. ಸಚಿವರ ರಾಜೀನಾಮೆಯಿಂದ ಪಾರದರ್ಶಕ ತನಿಖೆ ನಡೆಯಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.