alex Certify ರಮೇಶ್ ಜಾರಕಿಹೊಳಿ ರಾಜೀನಾಮೆ: ಸಿಎಂಗೆ ಧನ್ಯವಾದ ಎಂದ ದಿನೇಶ್ ಕಲ್ಲಹಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿ ರಾಜೀನಾಮೆ: ಸಿಎಂಗೆ ಧನ್ಯವಾದ ಎಂದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಪ್ರಕರಣ ಬಯಲಾದ ಬೆನ್ನಲ್ಲೇ ಇದೀಗ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪತ್ರ ರವಾನಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳಿಗೆ ಪ್ರಮುಖ ಕಾರಣರಾಗಿರುವ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಸಚಿವರ ರಾಜೀನಾಮೆ ಬೆನ್ನಲ್ಲೇ ಪ್ರತಿಕ್ರಿಯಿಸಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾಗಲೆಂದು ಸಚಿವರ ರಾಜೀನಾಮೆ ಪಡೆದಿರುವುದು ಸಂತಸವಾಗಿದೆ. ಸಿಎಂ ಯಡಿಯೂರಪ್ಪನವರಿಗೆ ಈ ನಿಟ್ಟಿನಲ್ಲಿ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.

ಪ್ರಕರಣದ ಬಗ್ಗೆ ನಿಸ್ಪಕ್ಷಪಾತವಾಗಿ ತನಿಖೆ ನಡೆಸಲಿ, ಸಂತ್ರಸ್ತ ಯುವತಿಗೂ ನ್ಯಾಯ ಸಿಗುವಂತಾಗಲಿ ಎಂಬುದು ನನ್ನ ಆಗ್ರಹ. ಸಚಿವರ ರಾಜೀನಾಮೆಯಿಂದ ಪಾರದರ್ಶಕ ತನಿಖೆ ನಡೆಯಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...