alex Certify ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು…..?

ಬೆಂಗಳೂರು: ಸಿಡಿ ಪ್ರಕರಣ ಬಹಿರಂಗವಾದ ಬೆನ್ನಲ್ಲೇ ತಕ್ಷಣ ರಮೇಶ್ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ತನ್ನ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಅರುಣ್ ಸಿಂಗ್, ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಜನತೆಗೆ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಹೇಳಿದರು.

ಮಕ್ಕಳಿಗೆ ʼಕೊರೊನಾʼ ಹರಡುವ ಸಾಧ್ಯತೆ ಕುರಿತು ಕೇಂದ್ರ ಸಚಿವರಿಂದ ಮಹತ್ವದ ಮಾಹಿತಿ

ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಕೇಳಿ ಬಂದಾಕ್ಷಣ ರಾಜೀನಾಮೆ ಪಡೆಯಲಾಯ್ತು. ಆದರೆ ಕಾಂಗ್ರೆಸ್ ನಲ್ಲಿ ಇಂಥಹ ಸನ್ನಿವೇಶವಿಲ್ಲ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯವಾಗುತ್ತೆ. ಇನ್ನು 6 ಸಚಿವರು ಕೋರ್ಟ್ ಮೆಟ್ಟಿಲೇರಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ತಮ್ಮ ವಿರುದ್ಧ ತೇಜೋವಧೆ ಮಾಡುತ್ತಾರೆ ಎಂಬ ಕಾರಣಕ್ಕೆ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...