alex Certify ರಸ್ತೆ ಮಧ್ಯೆಯೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆ ಮಧ್ಯೆಯೇ ಪಲ್ಟಿಯಾದ ಗ್ಯಾಸ್ ಟ್ಯಾಂಕರ್

ಕಾರವಾರ: ಗ್ಯಾಸ್ ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆಯೇ ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66ರ ಹಂದಿಗೋಣ ಬಳಿ ಈ ಘಟನೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಂದಿಗೋಣ ಬಳಿ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಪರಿಣಾಮ ಟ್ಯಾಂಕರ್ ನಲ್ಲಿದ್ದ ಅನಿಲ ಕೂಡ ಸೋರಿಕೆಯಾಗಿದೆ. ಕೆಲ ಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕೆಲ ಕಾಲ ಹೆದ್ದಾರಿ ಸಂಚಾರ ಬಂದ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...