ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮಾಸ್ಕ್ ಧರಿಸದಿದ್ದರೆ ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 250 ರೂ. ಹಾಗೂ ಇತರೆ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು ಎಂದು ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಒಂದೇ ದಿನದಲ್ಲಿ 50,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ – ಸಾವಿನ ಸಂಖ್ಯೆಯಲ್ಲಿಯೂ ಏರಿಕೆ
ತಡರಾತ್ರಿ ರಾಜಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು, ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿಕೊಂಡು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.