ಬೆಳಗಾವಿ: ರಾಸಲೀಲೆ ಸಿಡಿ ಸ್ಫೋಟದ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ತಲೆದಂಡವಾಗಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ ನ ಬಸವ ವೃತ್ತದಲ್ಲಿ ಪ್ರತಿಭಟನೆ ನಡೆಸಿರುವ ರಮೇಶ್ ಜಾರಕಿಹೊಳಿ ಬೆಂಬಲಿಗರು, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದರೆ ಇಡೀ ಬೆಳಗಾವಿ ಜಿಲ್ಲೆ ಬಂದ್ ಮಾಡಿ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ. ರಾಸಲೀಲೆ ಸಿಡಿ ಪ್ರಕರಣ ರಮೇಶ್ ಜಾರಕಿಹೊಳಿ ವಿರುದ್ಧ ನಡೆದ ಷಡ್ಯಂತ್ರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.