ಬೆಳಗಾವಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ರೋಗಿಗಳು ಮೃತಪಟ್ಟ ಘಟನೆ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದ್ದು, ಕುಂದಾನಗರಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ರೋಗಿಗಳು ಆಕ್ಸಿಜನ್ ಕೊರತೆಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಬೆಳಗಾವಿಯ ಬಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿ ಕೇವಲ 3 ಗಂಟೆಯಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಕೊರತೆಯಿಂದ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಮ್ಲಜನಕ ಪೂರೈಕೆ ಇಲ್ಲದೆಯೇ ಸೋಂಕಿತ ಸಾವನ್ನಪ್ಪಿದ್ದರೆ ಅದು ನರಮೇಧಕ್ಕೆ ಸಮ: ಹೈಕೋರ್ಟ್ ಮಹತ್ವದ ಹೇಳಿಕೆ
ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರು ಪ್ರಾಣವಾಯುವಿಗಾಗಿ ಪರದಾಡಿ ಸಾವನ್ನಪ್ಪುತ್ತಿದ್ದಾರೆ.