ಬೆಂಗಳೂರು: ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ. ವಸತಿ ಹಾಗೂ ವಾಣಿಜ್ಯ ಕಟ್ಟಡಗಳ ಮೇಲೆ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನಗರಪಾಲಿಕೆ ತಿದ್ದುಪಡಿ ವಿಧೇಯಕ ಮಂಡನೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹೊಸ ವರ್ಷದಿಂದ ಆಸ್ತಿ ತೆರಿಗೆ ಹೆಚ್ಚಳದ ಬಿಸಿ ತಟ್ಟಲಿದೆ.
ಇದೇ ವೇಳೆ ಜನವರಿ 18ರಂದು ಜಂಟಿ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.