ಬೆಳಗಾವಿ ಸಂಸದರಾಗಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕಳೆದ ರಾತ್ರಿ ವಿಧಿವಶರಾಗಿದ್ದಾರೆ. ಅವರ ಹಠಾತ್ ಸಾವು ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ರಾಜ್ಯದ ಜನತೆಯನ್ನೂ ಬೆಚ್ಚಿಬೀಳಿಸಿದೆ.
ಹದಿನೈದು ದಿನಗಳ ಹಿಂದೆ ಕೊರೊನಾ ಸೋಂಕಿಗೊಳಗಾಗಿದ್ದ ಅವರಿಗೆ ಯಾವುದೇ ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ವಿಚಾರವನ್ನು ಸ್ವತಃ ಸುರೇಶ್ ಅಂಗಡಿವರೇ ಟ್ವೀಟ್ ಮೂಲಕ ತಿಳಿಸಿದ್ದರು.
ಸುರೇಶ್ ಅಂಗಡಿಯವರು ಗುಣಮುಖರಾಗಿ ಬರುತ್ತಾರೆ ಎಂದು ಎಲ್ಲರೂ ಭಾವಿಸಿದ್ದಾಗಲೇ ಇಂತಹದೊಂದು ಘೋರ ಘಟನೆ ನಡೆದುಹೋಗಿದೆ. ಕೊರೊನಾ ಎಂಬ ಮಹಾಮಾರಿಗೆ ಬಲಿಯಾಗುವ ಮೂಲಕ ಸುರೇಶ್ ಅಂಗಡಿ ಬಾರದ ಲೋಕಕ್ಕೆ ತೆರಳಿದ್ದಾರೆ.