ಬೆಳಗಾವಿ: ಕೊರೊನಾ ಸೋಂಕು ರಾಜ್ಯ ರಾಜಕಾರಣಿಗಳನ್ನು ಬೆಂಬಿಡದೇ ಕಾಡುತ್ತಿದೆ. ಇದೀಗ ಕೈಮಗ್ಗ ಹಾಗೂ ಜವಳಿ ಖಾತೆ ಸಚಿವ ಶ್ರೀಮಂತ ಪಾಟೀಲ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತಃ ಸಚಿವರು ಮಾಹಿತಿ ನೀಡಿದ್ದು, ತಮಗೆ ಕೊವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟೀವ್ ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ಆದರೂ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಗುಣಮುಖನಾಗಿ ಜನರ ಸೇವೆ ಮಾಡಲು ಬರುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ಮೂರು ದಿನಗಳಿಂದ ತಮ್ಮ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಕೊವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.