ಸಂಕಷ್ಟದ ಪರಿಸ್ಥಿತಿಗಳಲ್ಲಿ ಸಹಾಯ ಕೋರಿ ಪೊಲೀಸ್ ಠಾಣೆಗೆ ಹೋಗಲು ಮಹಿಳೆಯರು ಹಿಂಜರಿಯುತ್ತಾರೆ. ಇದರಿಂದಾಗಿ ಬಹಳಷ್ಟು ಸಂದರ್ಭಗಳಲ್ಲಿ ಅಪರಾಧ ಪ್ರಕರಣಗಳು ಬಹಿರಂಗವಾಗುವುದೇ ಇಲ್ಲ.
ಹೀಗಾಗಿ ಮಹಿಳೆಯರ ರಕ್ಷಣೆ ಮತ್ತು ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಈ ಹಿಂದೆ ನಿರ್ಭಯಾ ಯೋಜನೆಯನ್ನು ಆರಂಭಿಸಿದ್ದು, ಸೂಕ್ತ ಸಿದ್ಧತೆ ಕೈಗೊಳ್ಳುವ ಸಲುವಾಗಿ ರಾಜ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿದೆ.
ಈ ಯೋಜನೆಯಡಿ ರಾಜ್ಯಕ್ಕೆ 282 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದ್ದು, ಹೀಗಾಗಿ ರಾಜ್ಯದ ಪ್ರತಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಹೆಲ್ಪ್ ಡೆಸ್ಕ್ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ವಿಷಯವನ್ನು ತಿಳಿಸಿದ್ದು ಪ್ರತಿ ಪೊಲೀಸ್ ಠಾಣೆಗೆ ಒಂದು ಲಕ್ಷ ರೂಪಾಯಿಗಳಂತೆ ರಾಜ್ಯದ 700 ಪೊಲೀಸ್ ಠಾಣೆಗಳಿಗೆ ಒಟ್ಟು 7 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.