alex Certify ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಹೈಕಮಾಂಡ್ ನಿಂದ ಅಚ್ಚರಿಯ ಅಭ್ಯರ್ಥಿ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಹೈಕಮಾಂಡ್ ನಿಂದ ಅಚ್ಚರಿಯ ಅಭ್ಯರ್ಥಿ ಘೋಷಣೆ ಸಾಧ್ಯತೆ

ನವದೆಹಲಿ: ಡಿ.1ರಂದು ನಡೆಯಲಿರುವ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಇಂದು ಅಥವಾ ನಾಳೆ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆಯಿದ್ದು, ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಮನೆಮಾಡಿದೆ.

ಅಶೋಕ್ ಗಸ್ತಿ ನಿಧನದಿಂದ ತೆರವಾಗಿರುವ ರಾಜ್ಯಸಭೆಯ ಒಂದು ಸ್ಥಾನಕ್ಕೆ ಭಾರಿ ಪೈಪೋಟಿ ಆರಂಭವಾಗಿದ್ದು, ನಟ ರಜನಿಕಾಂತ್, ಖುಷ್ಬೂ ಹೆಸರೂ ಚರ್ಚೆಯಲ್ಲಿದೆ ಎನ್ನಲಾಗಿದೆ. ರಾಜ್ಯ ಬಿಜೆಪಿ ನಾಯಕರು ಮೂರು ಹೆಸರನ್ನು ಶಿಫಾರಸು ಮಾಡಿದ್ದಾರೆ. ಅಶೋಕ್ ಗಸ್ತಿ ಪತ್ನಿ ಸುಮಾ ಗಸ್ತಿ, ವಿಧಾನ ಪರಿಷತ್ ಮಾಜಿ ಸದಸ್ಯ ಶಂಕರಪ್ಪ ಹಾಗೂ ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ ಹೆಸರನ್ನು ಸೂಚಿಸಿದ್ದಾರೆ.

ಇನ್ನೊಂದೆಡೆ ರಾಜ್ಯ ಬಿಜೆಪಿ ಸೂಚಿಸಿರುವ ಈ ಮೂವರ ಹೆಸರನ್ನು ಬಿಟ್ಟು ಹೈಕಮಾಂಡ್ ಅಚ್ಚರಿ ಅಭ್ಯರ್ಥಿ ಹೆಸರು ಘೋಷಿಸುವ ಸಾಧ್ಯತೆಯಿದ್ದು, ನಟ ರಜನಿಕಾಂತ್ ಅಥವಾ ನಟಿ ಖುಷ್ಬೂ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...