alex Certify ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದ ಸುದ್ದಿ ಸುಳ್ಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ನಿಧನದ ಸುದ್ದಿ ಸುಳ್ಳು

ಕೊರೊನಾ ಸೋಂಕು ಪೀಡಿತರಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ವಿಧಿವಶರಾಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಆದರೆ ಈ ಕುರಿತು ಮಣಿಪಾಲ್ ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದು, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅಶೋಕ್ ಗಸ್ತಿ ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ. ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ ಎಂದು ತಿಳಿಸಲಾಗಿದೆ.

ಅಶೋಕ್ ಗಸ್ತಿ ವಿಧಿವಶರಾಗಿದ್ದಾರೆ ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ಬಹುತೇಕ ರಾಜಕೀಯ ನಾಯಕರು ತಮ್ಮ ಸಂತಾಪ ವ್ಯಕ್ತಪಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...