ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದರೂ ಸಹ ಈ ಸ್ಥಾನಗಳಿಗೆ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.
ರಾಜ್ಯಸಭಾ ಚುನಾವಣೆಗೆ ಮಂಗಳವಾರದಂದು ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ಸಲ್ಲಿಸಿರುವರಾದರೂ ಇವರಿಗೆ ಅಗತ್ಯ ಸಂಖ್ಯೆಯ ಸೂಚಕರು ಇಲ್ಲದೇ ಇರುವುದರಿಂದ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನುಳಿದಂತೆ ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದು, ಆಯ್ಕೆ ಕುರಿತಂತೆ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ.
ಇನ್ನು ವಿಧಾನಪರಿಷತ್ತಿನ ಏಳು ಸ್ಥಾನಗಳಿಗೂ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್ 29ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ.