alex Certify ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬೆಳವಣಿಗೆ: ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಗೀತಾ ಶಿವರಾಜ್‌ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಬೆಳವಣಿಗೆ: ಕಾಂಗ್ರೆಸ್‌ ಸೇರ್ಪಡೆಗೆ ಮುಂದಾದ ಗೀತಾ ಶಿವರಾಜ್‌ ಕುಮಾರ್

ಬೆಂಗಳೂರು; ರಾಜ್ಯ ರಾಜಕೀಯದಲ್ಲಿ ದಿನಕ್ಕೊಂದು ವಿದ್ಯಮಾನಗಳು ನಡೆಯುತ್ತಿದ್ದು, ಜೆಡಿಎಸ್ ಮುಖಂಡ, ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅವರ ಸಹೋದರಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಚರ್ಚೆ ನಡೆಸಿದ ಮಧು ಬಂಗಾರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಕೂಡ ಶೀಘ್ರದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

ಪ್ರಯಾಣಿಕನ ಪ್ರಾಣ ಉಳಿಯಲು ಕಾರಣವಾಯ್ತು RPF ಸಿಬ್ಬಂದಿ ಸಮಯಪ್ರಜ್ಞೆ

ನನಗೆ ಕಾಂಗ್ರೆಸ್ ಗೆ ಬರುವಂತೆ ಡಿ.ಕೆ. ಶಿವಕುಮಾರ್ ಹಲವು ವರ್ಷಗಳಿಂದ ಆಹ್ವಾನಿಸುತ್ತಿದ್ದರು. ಇದೀಗ ಕಾಲ ಕೂಡಿಬಂದಿದೆ. ಬಂಗಾರಪ್ಪನವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ ಕಾಂಗ್ರೆಸ್ 28 ಲೋಕಸಭಾ ಕ್ಷೇತ್ರಗಳ ಪೈಕಿ 27 ಸ್ಥಾನ ಗೆದ್ದಿತ್ತು. ಬಂಗಾರಪ್ಪನವರು ಸಿಎಂ ಆಗಿದ್ದಾಗ 23 ಸ್ಥಾನ ಗೆದ್ದಿತ್ತು. ಆ ಕಾಲ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮರುಕಳಿಸಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...