alex Certify ರಾಷ್ಟ್ರೀಯ ಹೆದ್ದಾರಿಯಾಗಲಿದೆಯಾ ಶಿವಮೊಗ್ಗ – ಹಾನಗಲ್ ರಸ್ತೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರೀಯ ಹೆದ್ದಾರಿಯಾಗಲಿದೆಯಾ ಶಿವಮೊಗ್ಗ – ಹಾನಗಲ್ ರಸ್ತೆ…?

ಶಿವಮೊಗ್ಗದಿಂದ ಹುಬ್ಬಳ್ಳಿಗೆ ತಮ್ಮ ವಾಹನಗಳಲ್ಲಿ ತೆರಳುವ ಬಹುತೇಕರು ಶಿಕಾರಿಪುರ, ಶಿರಾಳಕೊಪ್ಪ ಮಾರ್ಗವಾಗಿ ಹಾನಗಲ್ ಮೂಲಕ ಹೋಗುತ್ತಾರೆ. ಇದರಿಂದ ಶಿವಮೊಗ್ಗ – ಹುಬ್ಬಳ್ಳಿ ನಡುವಿನ ಅಂತರ 40 ಕಿ.ಮೀ. ಕಡಿಮೆಯಾಗುತ್ತದೆ. ಅಲ್ಲದೆ ರಸ್ತೆಯು ಸಹ ಅತ್ಯುತ್ತಮವಾಗಿದೆ.

ರಾಜ್ಯ ಸರ್ಕಾರ ಸುಮಾರು 420 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ – ಹಾನಗಲ್ ರಸ್ತೆಯನ್ನು ವಿಸ್ತರಿಸಿ ರಾಜ್ಯ ಹೆದ್ದಾರಿಯನ್ನಾಗಿ ಪರಿವರ್ತಿಸಿದ್ದು, ಇದನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತ ದರ್ಜೆಗೇರಿಸುವ ಕುರಿತಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಶಿಕಾರಿಪುರದಲ್ಲಿ ಈ ಕುರಿತು ಮಾತನಾಡಿದ ಅವರು, ಶಿವಮೊಗ್ಗ – ಹಾನಗಲ್ ರಸ್ತೆಯನ್ನು ಅಭಿವೃದ್ಧಿಪಡಿಸಿರುವುದರಿಂದ ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲವಾಗಿದೆ. ಯಾರಿಗೂ ಹೊರೆಯಾಗಬಾರದೆಂಬ ಕಾರಣಕ್ಕೆ ಟೋಲ್ ಸಂಗ್ರಹ ಮಾಡಲು ಮುಂದಾಗಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...