
ಇತ್ತೀಚೆಗೆ ರೈತ ಸಂಘಟನೆಗಳ ಪ್ರತಿಭಟನೆ ನಡೆಯುತ್ತಿದ್ದು ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಇದೀಗ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ರೈತರ ಪರವಾಗಿ ಟ್ವೀಟ್ ಮಾಡಿದ್ದಾರೆ.
ಒಂದಲ್ಲೊಂದು ರೂಪದಲ್ಲಿ ನಾವೆಲ್ಲ ಕೃಷಿ ಹಿನ್ನೆಲೆಯಿಂದಲೇ ಬಂದವರು. ರಾಜಕಾರಣಿಯೋ, ಕಲಾವಿದರೋ ಅಥವಾ ಉದ್ಯಮಿಯೋ. ಅದು ಯಾರೇ ಆದರೂ ಸರಿ. ರೈತರು ತಮ್ಮ ಜಮೀನುಗಳಲ್ಲಿ ಕಷ್ಟಪಟ್ಟು, ಬೆವರು ಹರಿಸಿ ಬೆಳೆ ಬೆಳೆದರೆ ಮಾತ್ರ ನಾವೆಲ್ಲಾ ಅಚ್ಚುಕಟ್ಟಾಗಿ ಕುಳಿತು ಭೋಜನ ಸವಿಯುವುದು. ಹಾಗಾಗಿ ಯಾರೇ ಆದರೂ ಸರಿ. ರೈತರ ಬಗ್ಗೆ ಅಗೌರವ ತೋರುವುದು ಸರಿಯಲ್ಲ ಎಂದು ನಟ ಶ್ರೀಮುರಳಿ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.