ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹೀಗಾಗಿ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಕೊರೊನಾ ಲಾಕ್ಡೌನ್ ಕಾರಣಕ್ಕೆ ತಮ್ಮ ಬೆಳೆಯನ್ನು ಸಕಾಲಕ್ಕೆ ಮಾರಾಟ ಮಾಡಲಾಗದೆ ಆರ್ಥಿಕವಾಗಿ ಕಂಗೆಟ್ಟಿದ್ದ ರೈತ ಸಮುದಾಯ ಮುಂಗಾರು ಹಂಗಾಮಿನಲ್ಲಿ ಉತ್ತಮ ಬೆಳೆ ಬೆಳೆಯುವ ಆಶಯದೊಂದಿಗೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾರೆ.
ಇದರ ಮಧ್ಯೆ ಆರ್ಥಿಕವಾಗಿ ಕಂಗೆಟ್ಟಿರುವ ರೈತರಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂಗಾರು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ರಾಜ್ಯದ ಎಲ್ಲ ಸಹಕಾರಿ ಬ್ಯಾಂಕುಗಳಿಂದ ಹತ್ತು ದಿನಗಳಲ್ಲಿ ರೈತರಿಗೆ ಬೆಳೆ ಸಾಲ ನೀಡುವ ವ್ಯವಸ್ಥೆ ಮಾಡಲು ಮುಂದಾಗಿದೆ. ಸಹಕಾರ ಸಚಿವ ಸೋಮಶೇಖರ್ ಕಲಬುರಗಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಕೃಷಿ ಚಟುವಟಿಕೆ ಆರಂಭವಾಗಿದ್ದು, ಈ ವೇಳೆ ರೈತರಿಗೆ ಹಣದ ಅಗತ್ಯವಿದೆ ಎಂಬುದನ್ನು ಅರಿತಿರುವ ಸರ್ಕಾರ ನಬಾರ್ಡ್ ಮೂಲಕ 14,500 ಕೋಟಿ ರೂಪಾಯಿ ಸಾಲವನ್ನು ನೀಡಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.