ಶಿವಮೊಗ್ಗ: ಪ್ರಸಕ್ತ ಸಾಲಿನಲ್ಲಿ ಕೋವಿಡ್-19 ಲಾಕ್ ಡೌನ್ನಿಂದಾಗಿ ರಾಜ್ಯದ ಪ್ರಮುಖ ಬೆಳೆಯಾದ ಮುಸುಕಿನ ಜೋಳಕ್ಕೆ ಬೇಡಿಕೆ ಇಲ್ಲದ ಕಾರಣ ಬೆಳಗಾರರು ಸಂಕಷ್ಟಕ್ಕೊಳಗಾಗಿರುವುದರಿಂದ ಸರ್ಕಾರವು ಪ್ರತಿ ಬೆಳೆಗಾರರಿಗೆ 5,000 ರೂ. ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ಪರಿಹಾರ ಘೋಷಿಸಿಲಾಗಿದೆ.
2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಮುಸುಕಿನ ಜೋಳ ಬೆಳೆ ದಾಖಲಾಗಿರುವ ರೈತರ ಪಟ್ಟಿಯನ್ನು ಗ್ರಾಮ ಪಂಚಾಯತಿ ಕಚೇರಿಯ ನಾಮ ಫಲಕದಲ್ಲಿ ಪ್ರದರ್ಶಿಸಲಾಗಿರುತ್ತದೆ. ಪಟ್ಟಿಯಲ್ಲಿರುವ ರೈತರು ಈಗಾಗಲೇ ಇಲಾಖೆಯ ಕೆ.ಕಿಸಾನ್ ತಂತ್ರಾಂಶದಲ್ಲಿ ನೋಂದಾಯಿಸಿ ಎಫ್.ಐ.ಡಿ. ಸಂಖ್ಯೆ (Farmer Identification Number) ಹೊಂದಿರುವ ರೈತರಿಗೆ 5000 ರೂ. ಆರ್ಥಿಕ ನೆರವನ್ನು ನೇರ ನಗರದ ವರ್ಗಾವಣೆ ಮೂಲಕ ಪರಿಹಾರ ನೀಡಲು ಕ್ರಮ ವಹಿಸಲಾಗಿದೆ.
ಎಫ್.ಐ.ಡಿ.ಸಂಖ್ಯೆ ಹೊಂದಿರದ ರೈತರು ಸಮೀಪದ ರೈತರ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ತಮ್ಮ ಜಮೀನಿನ ಪಹಣಿ, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಒದಗಿಸಿ ಎಫ್.ಐ.ಡಿ.ಸಂಖ್ಯೆಯನ್ನು ಪಡೆದುಕೊಳ್ಳುವಂತೆ ಸೂಚಿಸಿದೆ.
ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದು ನೋಟರಿಯವರಿಂದ ದೃಢೀಕರಿಸಿ ಸಲ್ಲಿಸತಕ್ಕದ್ದು. ತಂದೆ ಅಥವಾ ತಾಯಿ ಹೆಸರಿನಲ್ಲಿ ಜಮೀನು ಇದ್ದು ಅವರು ಮರಣ ಹೊಂದಿದ್ದಲ್ಲಿ ಮಾತ್ರ ಗ್ರಾಮ ಲೆಕ್ಕಿಗರಿಂದ Certificate of Succession ಪಡೆದು, ಕುಟುಂಬದ ಇತರೆ ಸದಸ್ಯರ ನಿರಾಕ್ಷೇಪಣಾ ಪತ್ರದೊಂದಿಗೆ ತಮ್ಮ ಹೆಸರಿನಲ್ಲಿ ಅರ್ಜಿ ಸಲ್ಲಿಸತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.