ಬೆಂಗಳೂರು: ರೈತರ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ದೆಹಲಿಯಲ್ಲಿ ಉದಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಟ್ವೀಟ್ ಮಾಡಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಯು.ಟಿ.ಖಾದರ್ ಸ್ವಾಮಿ ವಿವೇಕಾನಂದರ ಮಾತನ್ನು ನೆನಪಿಸುವ ಮೂಲಕ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಸಮಾಜವನ್ನು ನಿರ್ಲಕ್ಷಿಸಿದಾಗ ಅಧ:ಪತನ ಆರಂಭ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ನೆನಪಿಸಲು ಈ ಸಂದರ್ಭದಲ್ಲಿ ಬಯಸುತ್ತೇನೆ ಎಂದು ಹೇಳಿದ್ದಾರೆ.
ದೆಹಲಿಯ ಬೀದಿ ಬೀದಿಗಳಲ್ಲಿ ರೈತರು ಹೋರಾಟ ಮಾಡುತ್ತಿದ್ದಾರೆ. ಸಾವು-ನೋವುಗಳು ಸಂಭವಿಸುತ್ತಿವೆ. ಇದು ನಿಜಕ್ಕೂ ದು:ಖಕರ. ಅಂದು ಮಾತೆತ್ತಿದರೆ ಮನಮೋಹನ್ ಸಿಂಗ್ ಅವರನ್ನು ಮೌನಿಬಾಬಾ ಎಂದು ಟೀಕಿಸುತ್ತಿದ್ದ ಬಿಜೆಪಿಗರು ಇಂದು ಮೌನವಾಗಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.