ನಿನ್ನೆಯಷ್ಟೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. ಇದರಲ್ಲಿ ಮುಖ್ಯವಾಗಿ ಆಂಬುಲೆನ್ಸ್ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
108 ಆಂಬುಲೆನ್ಸ್ ಟೆಂಡರ್ ಕರೆಯಲು ಕೋರ್ಟ್ ಸೂಚನೆ ನೀಡಿತ್ತು. ಹೀಗಾಗಿ ಟೆಂಡರ್ ಕರೆದಿದ್ದೇವೆ ಎಂದ್ರು. ಆಂಬ್ಯುಲೆನ್ಸ್ ವ್ಯವಸ್ಥೆಗೆ ಕಿಲೋಮೀಟರ್ ವ್ಯಾಪ್ತಿ ಇಲ್ಲ. ರೋಗಿ ಹೇಳಿದ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ಮಾಧುಸ್ವಾಮಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಆರೋಗ್ಯ ಕವಚ 108 ಆಂಬುಲೆನ್ಸ್‌ಗಳು 711 ಇವೆ. ಇದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸಲಾಗುತ್ತದೆ. ಹೊಸ ಟೆಂಡರ್ ಕರೆಯಲಾಗಿದೆ. ಇದಕ್ಕಾಗಿ 1850 ಕೋಟಿ ರೂಪಾಯಿ ಅಂದಾಜಿಸಲಾಗಿದೆ. ಇನ್ನು ಆಸ್ಪತ್ರೆ ಎಷ್ಟೇ ದೂರ ಇದ್ದರೂ ಆಂಬುಲೆನ್ಸ್ ಸೇವೆ ಲಭ್ಯವಾಗಲಿದೆ ಎಂದರು.