alex Certify ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಚೆನ್ನಾಗಿದೆಯಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ ರಮೇಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಚೆನ್ನಾಗಿದೆಯಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ ರಮೇಶ್ ಜಾರಕಿಹೊಳಿ

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಬೆಳಗಾವಿ ರಾಜಕಾರಣ ಪ್ರಮುಖ ಕಾರಣ ಎಂದು ಹೇಳಲಾಗಿತ್ತು. ಅದರಲ್ಲೂ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಿರಸ ಇದಕ್ಕೆ ಮುಖ್ಯ ಕಾರಣವಾಗಿತ್ತು.

ಈ ಎಲ್ಲಾ ಕಾರಣಗಳಿಂದ ಮೈತ್ರಿ ಸರ್ಕಾರ ಪತನಗೊಂಡು ಈಗ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಅಂದಿನ ಸರ್ಕಾರ ಪತನಗೊಳ್ಳಲು ಪ್ರಮುಖ ಕಾರಣಕರ್ತರಾಗಿದ್ದ ರಮೇಶ್ ಜಾರಕಿಹೊಳಿ ಈಗ ಬಿಜೆಪಿ ಸರ್ಕಾರದಲ್ಲಿ ತಾವು ಬಯಸಿದ ಜಲಸಂಪನ್ಮೂಲ ಖಾತೆಯನ್ನು ಪಡೆದುಕೊಂಡು ಸಚಿವರಾಗಿದ್ದಾರೆ.

ಈಗಲೂ ಕೂಡ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಡುವೆ ಜಟಾಪಟಿ ಮುಂದುವರೆದಿದ್ದು, ಬೆಳಗಾವಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಇನ್ನೂ ಚೆನ್ನಾಗಿದೇಯಾ ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ ತರ ಆಗುತ್ತಿದೆ ಎಂದು ಕುಹಕವಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...