alex Certify ಲಾಕ್ಡೌನ್ ಅಲ್ಲ…..ಬದಲಿಗೆ ಸಿಗಲಿದೆ ಮತ್ತಷ್ಟು ವಿನಾಯಿತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ಅಲ್ಲ…..ಬದಲಿಗೆ ಸಿಗಲಿದೆ ಮತ್ತಷ್ಟು ವಿನಾಯಿತಿ…!

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದು, ಬಳಿಕ ಇದರಲ್ಲಿ ಸಾಕಷ್ಟು ಸಡಿಲಿಕೆಗಳನ್ನು ಮಾಡಲಾಗಿದೆ. ರಾಜ್ಯದಲ್ಲೂ ಸರ್ಕಾರ, ಕೆಲವೊಂದು ಕ್ಷೇತ್ರವನ್ನು ಹೊರತುಪಡಿಸಿ ಉಳಿದೆಲ್ಲ ಚಟುವಟಿಕೆಗಳಿಗೆ ಅನುಮತಿ ನೀಡಿದೆ.

ಇದರ ಮಧ್ಯೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದು, ಲಾಕ್ ಡೌನ್ ಮುಂದುವರಿಕೆ ಕುರಿತಂತೆ ಅಭಿಪ್ರಾಯ ಪಡೆಯಲಿದ್ದಾರೆ ಎನ್ನಲಾಗಿದೆ. ಬಹುತೇಕ ಲಾಕ್ಡೌನ್ ಮುಂದುವರಿಯುವುದಿಲ್ಲ ಎಂದು ಹೇಳಲಾಗಿದೆ.

ಮತ್ತೊಮ್ಮೆ ಲಾಕ್‌ ಡೌನ್‌ ಜಾರಿಗೊಳಿಸುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಸ್ಪಷ್ಟಪಡಿಸಿದ್ದು, ಯಾವುದೇ ಕಾರಣಕ್ಕೂ ಲಾಕ್ ಡೌನ್ ಮುಂದುವರಿಯುವುದಿಲ್ಲ. ಬದಲಾಗಿ ಇನ್ನಷ್ಟು ಸಡಿಲಿಕೆಗಳನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...