alex Certify ‘ಲಾಕ್ ಡೌನ್’ ನಡುವೆಯೂ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಾಕ್ ಡೌನ್’ ನಡುವೆಯೂ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಮೇ 31ರವರೆಗೆ ಮುಂದುವರಿಯಲಿದೆ. ಇದರ ಮಧ್ಯೆಯೇ ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರದ ವಿರುದ್ಧ ಇಂದು ಪ್ರತಿಭಟನೆ ನಡೆಸುತ್ತಿದೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ, ಗ್ರಾಮ ಪಂಚಾಯಿತಿಗಳಿಗೆ ನಾಮನಿರ್ದೇಶನ ಹಾಗೂ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಪ್ರಸ್ತಾಪ ಸೇರಿದಂತೆ ರಾಜ್ಯ ಸರ್ಕಾರದ ಕೆಲವೊಂದು ನಿರ್ಧಾರಗಳನ್ನು ವಿರೋಧಿಸಿ ಕಾಂಗ್ರೆಸ್ ಸಾಂಕೇತಿಕ ಪ್ರತಿಭಟನೆ ನಡೆಸುತ್ತಿದೆ.

ವಿಧಾನಸೌಧ ಹಾಗೂ ವಿಕಾಸಸೌಧ ಮಧ್ಯೆ ಇರುವ ಗಾಂಧಿ ಪ್ರತಿಮೆ ಮುಂಭಾಗ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಬಳಿಕ ರಾಜ್ಯ ಚುನಾವಣಾ ಆಯುಕ್ತರು ಹಾಗೂ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುತ್ತದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...