ಲಾಕ್ ಡೌನ್ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಆದ ನಷ್ಟವನ್ನು ಸರಿದೂಗಿಸುವ ಸಲುವಾಗಿ ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲು ಸಂಸ್ಥೆ ಮುಂದಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿ ಕೆಎಸ್ಆರ್ಟಿಸಿಗೆ 500 ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟ ಆಗಿದೆ ಎನ್ನಲಾಗಿದ್ದು, ಹೀಗಾಗಿ ಮೊದಲ ಹಂತದಲ್ಲಿ ಅಧಿಕಾರಿಗಳಿಗೆ ನೀಡಲಾಗುತ್ತಿದ್ದ ವಾಹನ ಮತ್ತು ಚಾಲಕರ ಭತ್ಯೆಯನ್ನು ಸೆಪ್ಟೆಂಬರ್ ವರೆಗೆ ನೀಡದಿರಲು ತೀರ್ಮಾನಿಸಲಾಗಿದೆ.
ಈ ಹಿಂದೆ ಅಧಿಕಾರಿಗಳಿಗೆ ಮಾಸಿಕ ವಾಹನ ಮತ್ತು ಚಾಲಕರ ವೆಚ್ಚವನ್ನು ಮರುಪಾವತಿ ಮಾಡಲಾಗುತ್ತಿದ್ದು, ಇದು 10 ಸಾವಿರ ರೂಪಾಯಿಗಳವರೆಗೆ ದೊರೆಯುತ್ತಿತ್ತು. ಇದೀಗ ಮೇ ತಿಂಗಳಿನಿಂದ ಸೆಪ್ಟೆಂಬರ್ ವರೆಗೆ ಈ ಭತ್ಯೆಯನ್ನು ಮರು ಪಾವತಿ ಮಾಡದಿರಲು ನಿರ್ಧರಿಸಲಾಗಿದೆ.