alex Certify ಲಾಕ್ ಡೌನ್ ಮಧ್ಯೆಯೂ ‘ಐಲ್ಯಾಂಡ್’ ನಲ್ಲಿ ಅಧಿಕಾರಿಗಳ ಪಾನಗೋಷ್ಠಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಮಧ್ಯೆಯೂ ‘ಐಲ್ಯಾಂಡ್’ ನಲ್ಲಿ ಅಧಿಕಾರಿಗಳ ಪಾನಗೋಷ್ಠಿ

St Mary's Island opens for tourists | Deccan Herald

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಕೆಲವೊಂದು ನಿರ್ಬಂಧಗಳೊಂದಿಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ ಮದ್ಯ ಮಾರಾಟವೂ ಒಂದಾಗಿದ್ದು, ಕೇವಲ ಪಾರ್ಸೆಲ್ ಗೆ ಮಾತ್ರ ಅನುಮತಿ ನೀಡಲಾಗಿದೆ.

ಆದರೆ ಇದನ್ನು ಸರ್ಕಾರಿ ಅಧಿಕಾರಿಗಳೇ ಉಲ್ಲಂಘಿಸಿರುವ ಪ್ರಕರಣವೊಂದು ವರದಿಯಾಗಿದ್ದು, ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಬಹಿರಂಗವಾಗಿಯೇ ಭರ್ಜರಿ ಪಾರ್ಟಿ ಮಾಡಿದ್ದಾರೆ. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಸದಸ್ಯ ಹಾಗೂ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಈ ಪಾರ್ಟಿಯಲ್ಲಿ ಇದ್ದರೆಂದು ಹೇಳಲಾಗಿದ್ದು, ರಾತ್ರಿ 11 ಗಂಟೆಯಾದರೂ ದ್ವೀಪದಲ್ಲಿ ಲೈಟ್ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 1 ಗಂಟೆ ಸುಮಾರಿಗೆ ಕರಾವಳಿ ಕಾವಲು ಪಡೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಪಾರ್ಟಿ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅವರುಗಳನ್ನು ಮಲ್ಪೆ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಹೇಳಿಕೆ ಪಡೆದು ಈಗ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...