alex Certify ಲಾಕ್ ಡೌನ್ ಸಮಯದಲ್ಲಿ ಊರಿಗೆ ತೆರಳಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಸಮಯದಲ್ಲಿ ಊರಿಗೆ ತೆರಳಿರುವ SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ರಾಜ್ಯದಲ್ಲಿ ನಿಗದಿಯಾಗಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಪರೀಕ್ಷೆಗಳನ್ನು ಜೂನ್ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ಕೇಂದ್ರ ಸರ್ಕಾರ ಈಗ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ಡೌನ್ ಮೇ 17ರವರೆಗೆ ಮುಂದುವರಿಯಲಿದ್ದು, ಇದು ಮುಗಿದ ನಂತರವೂ ಒಂದೊಮ್ಮೆ ಕೇಂದ್ರ ಸರ್ಕಾರ ಲಾಕ್ ಡೌನ್ ಮುಂದುವರಿಸಲು ಮುಂದಾದರೆ ಪರೀಕ್ಷೆ ನಡೆಸಲು ಯಾವ ಕ್ರಮ ಕೈಗೊಳ್ಳಬೇಕೆಂಬುದರ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಲಾಕ್ ಡೌನ್ ಅವಧಿಯಲ್ಲಿ ಕೆಲ ವಿದ್ಯಾರ್ಥಿಗಳು ಊರಿಗೆ ತೆರಳಿರುವ ಸಾಧ್ಯತೆ ಇರುವುದರಿಂದ ಅಂತಹ ವಿದ್ಯಾರ್ಥಿಗಳ ಮಾಹಿತಿ ಪಡೆದು ಅವರಿರುವ ಸ್ಥಳದ ಸನಿಹದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಕುರಿತಂತೆ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಅಲ್ಲದೆ ಪರೀಕ್ಷೆಯ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಮೇ 17ರ ಲಾಕ್ ಡೌನ್ ಅವಧಿ ಮುಗಿದ ಬಳಿಕವೇ ಪರೀಕ್ಷೆಯ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...