alex Certify ವಜಾಗೊಂಡಿದ್ದ ಪೇದೆ ಮನೆಯಲ್ಲಿತ್ತು ಗಾಂಜಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಜಾಗೊಂಡಿದ್ದ ಪೇದೆ ಮನೆಯಲ್ಲಿತ್ತು ಗಾಂಜಾ…!

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಡ್ರಗ್ಸ್ ವಿಚಾರ ಭಾರಿ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿಯರಾದ ರಾಗಿಣಿ ಹಾಗೂ ಸಂಜನಾ ಸೇರಿದಂತೆ ಆರು ಮಂದಿ ಬಂಧನಕ್ಕೊಳಗಾಗಿದ್ದಾರೆ.

ಇದರ ಜೊತೆಗೆ ಪೊಲೀಸರು ರಾಜ್ಯದ ಹಲವೆಡೆ ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಇದರ ಮಧ್ಯೆ ವಜಾಗೊಂಡಿದ್ದ ಪೊಲೀಸ್ ಪೇದೆಯೊಬ್ಬರ ಮನೆಯಲ್ಲಿ ಗಾಂಜಾ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ.

ಬೆಂಗಳೂರಿನಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿಯ ಸಂಜು ಪಾಟೀಲ್ ಎಂಬಾತ ಕೆಲ ಕಾರಣಗಳಿಗಾಗಿ ವಜಾಗೊಂಡಿದ್ದು, ಈತ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಧಾರವಾಡಕ್ಕೆ ಆಗಮಿಸಿದ್ದ ವೇಳೆ ದಾಳಿ ನಡೆಸಿ 283 ಗ್ರಾಂ ಗಾಂಜಾ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...