ಕಳೆದ ಕೆಲವು ದಿನಗಳಿಂದ ರಾಜ್ಯದ ಕರಾವಳಿ, ಮೆಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾರ್ವಜನಿಕರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ ಎನ್ನಲಾಗುತ್ತಿದ್ದು, ಹಳ್ಳ ಕೊಳ್ಳಗಳು – ನದಿ ಉಕ್ಕಿ ಹರಿಯುತ್ತಿವೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇಂದೂ ಕೂಡಾ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ.
ಉತ್ತರ ಕರ್ನಾಟಕದಲ್ಲೂ ಮಳೆ ಅನಾಹುತ ಮಾಡಿದ್ದು, ನೂರಾರು ಎಕರೆಯಲ್ಲಿ ಬೆಳೆದಿದ್ದ ಬೆಳೆ ಕೊಚ್ಚಿಕೊಂಡು ಹೋಗಿದೆ. ಹಲವೆಡೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಅಕಾಲಿಕ ಮಳೆಯಿಂದ ಭಾರೀ ಹಾನಿಯಾಗಿದೆ.