ವರ್ಗಾವಣೆ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಈ ಮೊದಲು ಮೇ – ಜೂನ್ ತಿಂಗಳಲ್ಲಿ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಆರಂಭಗೊಂಡು ಜುಲೈ ವೇಳೆಗೆ ಪೂರ್ಣಗೊಳ್ಳುತ್ತಿತ್ತು. ಆದರೆ ಕೊರೊನಾ ಲಾಕ್ ಡೌನ್ ನಿಂದಾಗಿ ಈ ಪ್ರಕ್ರಿಯೆ ಆರಂಭವಾಗಿರಲಿಲ್ಲ. ಅಲ್ಲದೆ ಸರ್ಕಾರ ಕೂಡ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ.
ಹೀಗಾಗಿ ಮಿತವ್ಯಯ ಸಾಧಿಸುವ ಉದ್ದೇಶದಿಂದ ಹಾಗೂ ವರ್ಗಾವಣೆಯಿಂದಾಗಿ ಕೊರೊನಾ ಕರ್ತವ್ಯಕ್ಕೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಸಾರ್ವತ್ರಿಕ ವರ್ಗಾವಣೆ ನಡೆಸದಿರಲು ತೀರ್ಮಾನಿಸಲಾಗಿದ್ದು, ವಿಶೇಷ ಪ್ರಕರಣಗಳಲ್ಲಿ ಮಾತ್ರ ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.