ವರ್ಗಾವಣೆ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನೌಕರರ ವರ್ಗಾವಣೆಯನ್ನು ಈ ಬಾರಿ ನಡೆಸುವುದಿಲ್ಲ ಎಂದು ಹೇಳಿದ್ದ ರಾಜ್ಯ ಸರ್ಕಾರ, ಬಳಿಕ ತನ್ನ ತೀರ್ಮಾನವನ್ನು ಬದಲಿಸಿತ್ತು.
ನೌಕರರ ವರ್ಗಾವಣೆ ಅನಿವಾರ್ಯವಾದ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಅನುಮತಿಯೊಂದಿಗೆ ಮಾತ್ರ ಇದನ್ನು ಮಾಡಬಹುದೆಂದು ಹೇಳಿದ್ದ ಸರ್ಕಾರ ಬಳಿಕ ಶಾಸಕರುಗಳ ಒತ್ತಡದ ಹಿನ್ನೆಲೆಯಲ್ಲಿ ಅದನ್ನು ಹಿಂಪಡೆದುಕೊಂಡಿತ್ತು.
ಇದೀಗ ನೌಕರರ ವರ್ಗಾವಣೆಗೆ ಸರ್ಕಾರ ವಿಧಿಸಿದ್ದ ಗಡುವನ್ನು ವಿಸ್ತರಿಸುವಂತೆ ಶಾಸಕರುಗಳು, ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ತಮಗೆ ಕ್ಷೇತ್ರಕ್ಕೆ ಭೇಟಿ ನೀಡಿ ಸಾರ್ವಜನಿಕರ ಮನವಿಯನ್ನು ಆಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ವರ್ಗಾವಣೆ ದಿನಾಂಕ ವಿಸ್ತರಿಸುವಂತೆ ಕೋರಿದ್ದು ಇದಕ್ಕೆ ಮುಖ್ಯಮಂತ್ರಿಗಳು ಸಮ್ಮತಿಸುವ ಸಾಧ್ಯತೆ ಇದೆ ಎನ್ನಲಾಗಿದೆ.