ರಾಜ್ಯವನ್ನು ಕೊರೊನಾ ಕಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆಯೂ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆ ನಡೆದಿದ್ದು ಫಲಿತಾಂಶವೂ ಹೊರಬಿದ್ದಿದೆ.
ಸಿಇಟಿ ಪರೀಕ್ಷೆಯೂ ನಡೆದಿದ್ದು, ವಿದ್ಯಾರ್ಥಿಗಳು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. 10ನೇ ತರಗತಿ ಫಲಿತಾಂಶ ಶೀಘ್ರದಲ್ಲೇ ಹೊರ ಬೀಳಲಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಕಾಲೇಜುಗಳಿಗೆ ಪ್ರವೇಶಾತಿ ಕಲ್ಪಿಸಿಕೊಡಲು ನಿರ್ಧರಿಸಲಾಗಿದೆ.
ಇದರ ಮಧ್ಯೆ ವಿಶೇಷ ಪ್ರಕರಣದಡಿಯಲ್ಲಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದ್ದು, ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕೌನ್ಸೆಲಿಂಗ್ ನಡೆಸಲಾಗುತ್ತದೆ.
ಸಿ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರನ್ನು ಮಾತ್ರ ವರ್ಗಾವಣೆಗೆ ಪರಿಗಣಿಸಲಾಗಿದ್ದು, ಇಂದು ಮಧ್ಯಾಹ್ನ 2ರಿಂದ 3 ಗಂಟೆಯವರೆಗೆ ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಉಪನ್ಯಾಸಕರಿಗೆ ಕೌನ್ಸೆಲಿಂಗ್ ನಡೆಯುತ್ತದೆ. ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಸಮಾಜಶಾಸ್ತ್ರ ಹಾಗೂ 4 ರಿಂದ ಸಂಜೆ 5 ಗಂಟೆಯವರೆಗೆ ರಸಾಯನಶಾಸ್ತ್ರ ಉಪನ್ಯಾಸಕರಿಗೆ ಕೌನ್ಸಲಿಂಗ್ ನಡೆಯಲಿದೆ.