alex Certify ‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಎಂಬುದು ಈವರೆಗೆ ಪ್ರಹಸನದಂತಾಗಿದೆ. ಪ್ರತಿ ಬಾರಿಯೂ ವರ್ಗಾವಣೆ ಒಂದಲ್ಲಾ ಒಂದು ಕಾರಣಕ್ಕೆ ಮುಂದೂಡಿಕೆಯಾಗುತ್ತಲೇ ಬರುತ್ತಿದ್ದು, ಈ ಬಾರಿಯಾದರೂ ಅದು ನಿಗದಿತ ಸಮಯದಲ್ಲಿ ನೆರವೇರಲಿದೆಯೇ ಎಂಬ ಪ್ರಶ್ನೆ ಶಿಕ್ಷಕ ಸಮುದಾಯದಲ್ಲಿ ಮೂಡಿತ್ತು.

ನವೆಂಬರ್ 5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಕುರಿತು ವೇಳಾ ಪಟ್ಟಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದರಾದರೂ ಸಹ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆ ವಿಳಂಬವಾಗಬಹುದು ಎಂದು ಹೇಳಲಾಗಿತ್ತು.

ಆದರೆ ಇದೀಗ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನವಂಬರ್ 5 ರಿಂದ ಆರಂಭವಾಗಲಿದೆ ಎಂದು ಘೋಷಿಸಿರುವ ಕಾರಣ ಇದು ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಹೀಗಾಗಿ ನವೆಂಬರ್ 5ರಂದು ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಲು ಸಮಸ್ಯೆಯಿಲ್ಲ ಎಂದು ತಿಳಿಸಿರುವ ಕಾರಣ ವರ್ಗಾವಣೆ ಪ್ರಕ್ರಿಯೆ ನಿಗದಿಯಂತೆ ನಡೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...