ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ನದ್ದೇ ದೊಡ್ಡ ಸಮಸ್ಯೆ. ಪಾದಚಾರಿ ಮಾರ್ಗಗಳಲ್ಲೂ ವಾಹನಗಳನ್ನು ಪಾರ್ಕ್ ಮಾಡುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದೀಗ ಹೈಕೋರ್ಟ್ ಇದಕ್ಕೆ ಬ್ರೇಕ್ ಹಾಕಲು ಮುಂದಾಗಿದೆ.
ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲ್ಲಿಸಿದವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಹಾಗೂ ಭಾರಿ ಮೊತ್ತದ ದಂಡ ವಿಧಿಸಲು ಪೊಲೀಸರು ಹಾಗೂ ಬಿಬಿಎಂಪಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಬೆಂಗಳೂರಿನ ವಕೀಲ ರಾಮಚಂದ್ರರೆಡ್ಡಿ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.