ಬೆಂಗಳೂರು; ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಇಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದು, ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ ಜ.27ರಂದು ಬಿಡುಗಡೆಯಾಗಿದ್ದರು. ಆದರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಇದರಿಂದ ಅವರ ಬಿಡುಗಡೆಗೆ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿತ್ತು.
ತ್ರಿವರ್ಣ ಧ್ವಜಕ್ಕೆ ಅಪಮಾನ – ಇಡೀ ದೇಶದ ಜನರು ತಲೆ ತಗ್ಗಿಸುವ ಕೃತ್ಯ – ದೆಹಲಿ ಹಿಂಸಾಚಾರಕ್ಕೆ ಪ್ರಧಾನಿ ಮೋದಿ ಗರಂ
ಇದೀಗ ಶಶಿಕಲಾ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಅವರಲ್ಲಿ ಕೊರೊನಾ ಲಕ್ಷಣಗಳು ಇಲ್ಲ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಇನ್ನು ಶಶಿಕಲಾ ಡಿಸ್ಚಾರ್ಜ್ ಹಿನ್ನೆಲೆಯಲ್ಲಿ ಅವರಿಗೆ ರಕ್ಷಣೆ ನೀಡಲೆಂದು 10 ಜನ ಚೆನ್ನೈನಿಂದ ಪ್ರೈವೇಟ್ ಎಸ್ಕಾರ್ಟ್ ಗಳು ಆಗಮಿಸಿದ್ದಾರೆ. ಆಸ್ಪತ್ರೆ ಸುತ್ತ 300ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಚಿನ್ನಮ್ಮ ಬೆಂಬಲಿಗರು, ಕುಟುಂಬದವರು ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರಳಿದ್ದಾರೆ.