alex Certify ವಿಚಾರಣೆ ವೇಳೆ ಹಲವರ ಹೆಸರು ಬಾಯ್ಬಿಟ್ಟ ಸಂಜನಾ…! ಇನ್ನೂ 24 ಮಂದಿಗೆ ಕಾದಿದೆಯಾ ಕಂಟಕ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಚಾರಣೆ ವೇಳೆ ಹಲವರ ಹೆಸರು ಬಾಯ್ಬಿಟ್ಟ ಸಂಜನಾ…! ಇನ್ನೂ 24 ಮಂದಿಗೆ ಕಾದಿದೆಯಾ ಕಂಟಕ…?

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ಸಂಜನಾ ಗಲ್ರಾಣಿ ಸಿಸಿಬಿ ವಿಚಾರಣೆ ವೇಳೆ ಹಲವರ ಹೆಸರನ್ನು ಬಾಯ್ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಡ್ರಗ್ಸ್ ಪ್ರಕರಣ ಸಂಬಂಧ ನಟಿ ಸಂಜನಾಳನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಅಧಿಕಾರಿಗಳು ಸತತ ಮೂರು ಗಂಟೆಗಳ ಕಾಲ ತೀವ್ರ ವಿಚಾರಣೆ ನಡೆಸಿದ್ದರು. ಈ ವೇಳೆ ಸಂಜನಾ 24 ಜನರ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಹೀಗಾಗಿ ಸಿಸಿಬಿ 24 ಜನರ ಹಿಟ್ ಲಿಸ್ಟ್ ಸಿದ್ಧಪಡಿಸಿದೆ ಎನ್ನಲಾಗಿದೆ.

ಸಂಜನಾಳಿಂದ ವಶಪಡಿಸಿಕೊಂಡಿದ್ದ ಮೊಬೈಲ್ ಮಾಹಿತಿ ಹಾಗೂ ಕೆಲ ಖಚಿತ ಮಾಹಿತಿ ಮೇರೆಗೆ ಸಂಜನಾಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸಂಜನಾ ತಾವು ಹಲವು ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದುದರ ಬಗ್ಗೆ, ಸ್ಯಾಂಡಲ್ ವುಡ್ ನ ಇಬ್ಬರು ತಾರೆಯರು, ಕಿರುತೆರೆಯ ನಾಲ್ವರು, ಮಾಜಿ ಶಾಸಕನ ಪುತ್ರ, ಖ್ಯಾತ ಉದ್ಯಮಿಗಳ ಮಕ್ಕಳು ಸೇರಿದಂತೆ ಒಟ್ಟು 24 ಜನರ ಜತೆ ತನಗೆ ಸ್ನೇಹ ಸಂಬಂಧವಿದ್ದುದಾಗಿ ತಿಳಿಸಿದ್ದಾರೆ.

ಸಂಜನಾ ನೀಡಿದ ಮಾಹಿತಿ ಆಧರಿಸಿ ಇನ್ನು 24 ಜನರಿಗೆ ಸಿಸಿಬಿ, ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡುವ ಸಾಧ್ಯತೆಯಿದೆ. ಇನ್ನು ಡ್ರಗ್ಸ್ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ವಹಿಸಿ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...