ಕೌಟುಂಬಿಕ ಪ್ರಕರಣಗಳಲ್ಲಿ ಅರ್ಜಿದಾರರು ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಅರ್ಜಿದಾರರು ಅರ್ಜಿ ಸಲ್ಲಿಸುವ ವೇಳೆ ಖುದ್ದು ಹಾಜರಾಗುವಂತೆ ಕೌಟುಂಬಿಕ ನ್ಯಾಯಾಲಯಗಳು ಸೂಚಿಸುವಂತಿಲ್ಲ ಎಂದು ತಿಳಿಸಿದೆ.
ದಂಪತಿ ಪರಸ್ಪರ ಸಮ್ಮತಿ ಮೇರೆಗೆ ಕೌಟುಂಬಿಕ ನ್ಯಾಯಾಲಯಗಳಲ್ಲಿ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲೂ ಅರ್ಜಿದಾರರು ಕೌಟುಂಬಿಕ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಒತ್ತಾಯಿಸುವಂತಿಲ್ಲ ಎಂದೂ ಸಹ ಹೈಕೋರ್ಟ್ ಆದೇಶ ಹೊರಡಿಸಿದೆ.
ವಾದಿ – ಪ್ರತಿವಾದಿಗಳ ಪರ ವಕೀಲರು ಹಾಜರಾಗಿದ್ದ ವೇಳೆ ಅರ್ಜಿದಾರರೂ ಅರ್ಜಿ ಸಲ್ಲಿಸುವ ವೇಳೆ ನ್ಯಾಯಾಲಕ್ಕೆ ಹಾಜರಾಗುವಂತೆ ಹೇಳುವಂತಿಲ್ಲ ಎಂದು ಹೈಕೋರ್ಟ್ ನ್ಯಾಯಪೀಠ ತಿಳಿಸಿದ್ದು, ಅರ್ಜಿದಾರರು ಖುದ್ದು ಹಾಜರಾತಿಗೆ ಸೂಚಿಸುವ ಸಂಬಂಧ ಕೌಟುಂಬಿಕ ನ್ಯಾಯಾಲಯಗಳು ರೂಢಿಸಿಕೊಂಡಿರುವ ಕ್ರಮಕ್ಕೆ ಯಾವುದೇ ಕಾನೂನಿನ ಆಧಾರವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.