
ಧಾರವಾಡ; ರಸ್ತೆ ಬದಿ ನಿಂತಿದ್ದ ಜನರ ಮೇಲೆ ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಅವರ ಕಾರು ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡದ ಕೆವಿಜಿ ಬ್ಯಾಂಕ್ ಎದುರು ಈ ಅಪಘಾತ ಸಂಭವಿಸಿದೆ. ಮೃತರನ್ನು ಶೇಖರ್ ಹಾಗೂ ಚರಣ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಏಪ್ರಿಲ್ 30 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಉ. ಪ್ರದೇಶ ಸರ್ಕಾರ
ಘಟನೆ ಬೆನ್ನಲ್ಲೇ ಸ್ಥಳೀಯರು ವಿಜಯ್ ಕುಲಕರ್ಣಿ ಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ವಿಜಯ್ ಕುಲಕರ್ಣಿ ಬೇರೊಂದು ಕಾರಿನಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದು ಬಂದಿದೆ.