alex Certify ವಿದೇಶದಿಂದ ಡ್ರಗ್ಸ್ ಆಮದು; ಆರೋಪಿಗಳಿಗೆ ನೆರವಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶದಿಂದ ಡ್ರಗ್ಸ್ ಆಮದು; ಆರೋಪಿಗಳಿಗೆ ನೆರವಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಬಗೆದಷ್ಟು ರಹಸ್ಯಗಳು ಬಯಲಾಗುತ್ತಿದ್ದು, ಇದೀಗ ಪೊಲೀಸರೇ ಆರೋಪಿಗಳಿಗೆ ಸಹಾಯ ಮಾಡುತ್ತಿದ್ದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ಡಾರ್ಕ್ ವೆಬ್ ಮೂಲಕ ವಿದೇಶದಿಂದ ಡ್ರಗ್ಸ್ ಆಮದು ಮಾಡಿಕೊಳ್ಳಲು ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಹೆಡ್ ಕಾನ್ಸ್ ಟೇಬಲ್ ಪ್ರಭಾಕರ್ ಎಂಬುವವರನ್ನು ಸಸ್ಪೆಂಡ್ ಮಾಡಲಾಗಿದೆ.

ಪ್ರಭಾಕರ್ ಸದಾಶಿವ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದು, ಡಾರ್ಕ್ ವೆಬ್ ಮೂಲಕ ಆರೋಪಿಗಳು ಖರೀದಿಸುತ್ತಿದ್ದ ಡ್ರಗ್ಸ್ ಗಳನ್ನು ಹಂಚಲು ಆರೋಪಿಗಳಿಗೆ ಅವರು ಕೇಳಿದ ವ್ಯಕ್ತಿಗಳ ಲೋಕೇಷನ್ ಹಾಗೂ ಇತರೆ ಮಾಹಿತಿಗಳನ್ನು ನೀಡಿ ನೆರವಾಗಿದ್ದರು ಎಂಬ ಆರೋಪ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...