ಕೊರೊನಾ ಕಾರಣಕ್ಕೆ ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದರ ಮಧ್ಯೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕುರಿತಂತೆ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯ ಒಟ್ಟು 37 ದಿನಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅಂಗವಾಗಿ ಅವರುಗಳ ಮನೆಗೆ ಆಹಾರ ಧಾನ್ಯಗಳನ್ನು ಪೂರೈಕೆ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಒಟ್ಟು 106.57 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ.
ಕೊರೊನಾ ಸೋಂಕು ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಬಿಸಿಯೂಟ ಸಿದ್ಧಪಡಿಸಿ ವಿತರಣೆ ಮಾಡುವುದು ಕಷ್ಟಕರವಾಗಿರುವ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರತಿ ಮಗುವಿಗೆ ದಿನವೊಂದಕ್ಕೆ ನಿಗದಿಪಡಿಸಿರುವ ಆಹಾರ ಧಾನ್ಯಗಳ ಪ್ರಮಾಣವನ್ನು ವಿತರಿಸುವಂತೆ ಸೂಚಿಸಲಾಗಿದೆ.
ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಎಲ್ಲ ಮಕ್ಕಳನ್ನು ಒಂದೇ ಬಾರಿಗೆ ಕರೆಯದೆ ಪೋಷಕರು ಅಥವಾ ಮಕ್ಕಳನ್ನು ಹಂತಹಂತವಾಗಿ ಕರೆದು ಆಹಾರ ಸಾಮಗ್ರಿಗಳನ್ನು ವಿತರಿಸುವಂತೆ ತಿಳಿಸಲಾಗಿದೆ.