ಕೊರೊನಾ ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಎಂಟು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳನ್ನು ಆರಂಭಿಸಲಾಗಿತ್ತು. ಇದಕ್ಕೂ ಮುನ್ನ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿ ಫಲಿತಾಂಶ ಪ್ರಕಟಿಸಲಾಗಿತ್ತು.
ಇದೀಗ ಶಾಲಾ – ಕಾಲೇಜುಗಳು ಆರಂಭವಾಗಿರುವ ಮಧ್ಯೆ ಕೊರೊನಾ ಎರಡನೇ ಅಲೆಯ ಭೀತಿ ಕಾಡುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಹಿನ್ನಲೆಯಲ್ಲಿ ಸರ್ಕಾರಗಳು ಕಠಿಣ ನಿರ್ಬಂಧಗಳನ್ನು ಮತ್ತೆ ಹೇರಲು ಮುಂದಾಗಿವೆ.
‘ಕೊರೊನಾ’ ಏರಿಕೆ ಹಿನ್ನೆಲೆಯಲ್ಲಿ ಮತ್ತೆ ಜಾರಿಯಾಗುತ್ತಾ ಲಾಕ್ ಡೌನ್…?
ಇದರ ಮಧ್ಯೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಸೇಂಟ್ ಮೇರಿಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜಿಗೆ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ.