ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದೀಗ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಲಾಗಿದ್ದು, ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದೆ.
ವಹಿವಾಟು ಬಂದ್ ಆಗಿದ್ದ ಕಾರಣ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದ ಸಣ್ಣ ಮಧ್ಯಮ ಮತ್ತು ದೊಡ್ಡ ಹೋಟೆಲ್, ಬಾರ್ ಅಂಡ್ ರೆಸ್ಟೋರೆಂಟ್ ಮೊದಲಾದ ಉದ್ಯಮಗಳಿಗೆ ರಾಜ್ಯ ಸರ್ಕಾರ ಒಂದಷ್ಟು ರಿಲೀಫ್ ನೀಡಿದೆ.
ಅಧಿಕೃತ ಪ್ರಾಧಿಕಾರದಿಂದ ಗುರುತಿಸಲ್ಪಟ್ಟು ಉದ್ಯಮಗಳನ್ನು ನಡೆಸಲು ಅಗತ್ಯ ಪ್ರಮಾಣ ಪತ್ರ ಪರವಾನಿಗೆ ಹೊಂದಿರುವ ಈ ವರ್ಗದ ವಿದ್ಯುತ್ ಗ್ರಾಹಕರಿಗೆ ಏಪ್ರಿಲ್ ಮತ್ತು ಮೇ ತಿಂಗಳ ವಿದ್ಯುತ್ ಬಿಲ್ ಹಾಗೂ ನಿಗದಿತ ಶುಲ್ಕ ಬಡ್ಡಿರಹಿತ ಪಾವತಿ ಅಂತಿಮ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.