alex Certify ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಕುರಿತು ಶೆಟ್ಟರ್‌ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಕುರಿತು ಶೆಟ್ಟರ್‌ ಹೇಳಿದ್ದೇನು…?

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಈ ಬಗ್ಗೆ ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ನಮ್ಮದು ರಾಷ್ಟ್ರೀಯ ಪಕ್ಷ. ಹಾಗೆ ಏಕಾಏಕಿ ಪಕ್ಷ ಸೇರ್ಪಡೆ ಸಾಧ್ಯವಿಲ್ಲ. ಒಂದು ವೇಳೆ ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಬಂದಿದ್ದರೆ ರಾಷ್ಟ್ರೀಯ ನಾಯಕರು ಜಿಲ್ಲಾ, ರಾಜ್ಯ ನಾಯಕರ ಜೊತೆ ಚರ್ಚಿಸುತ್ತಿದ್ದರು. ನಾನು ಇದೇ ಜಿಲ್ಲೆಯ ಜನಪ್ರತಿನಿಧಿ. ನನ್ನ ಗಮನಕ್ಕೆ ಬಂದಿಲ್ಲ ಎಂದರು.

ಅಲ್ಲದೇ ಬಿಜೆಪಿಯ ಸ್ಥಳೀಯ ನಾಯಕರೇ ಅವರಿಗೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿಸಬೇಕು ಹೊರತು ಯಾವುದೂ ಚರ್ಚೆಯಾಗದೇ ಪಕ್ಷ ಸೇರ್ಪಡೆ ಸಾಧ್ಯವಾಗಲ್ಲ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ತೀವ್ರ ಗೊಳಿಸಿರುವ ಬೆನ್ನಲ್ಲೇ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...